Search form

ಮಾರ್ಕನು 15:40-41

40-41ಇದಲ್ಲದೆ ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ, ಆತನು ಗಲಿಲಾಯದಲ್ಲಿದ್ದಾಗ ಆತನನ್ನು ಹಿಂಬಾಲಿಸಿ ಸೇವೆಮಾಡುತ್ತಿದ್ದವರಾದ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯನ ತಾಯಿಯಾದ ಮರಿಯಳು, ಸಲೋಮೆ ಎಂಬುವರು ಹಾಗೂ ಆತನ ಸಂಗಡ ಯೆರೂಸಲೇಮಿಗೆ ಬಂದಿದ್ದ ಇನ್ನೂ ಅನೇಕ ಸ್ತ್ರೀಯರು ಇದ್ದರು.

ಯೇಸುವಿನ ದೇಹವನ್ನು ಸಮಾಧಿಯಲ್ಲಿಟ್ಟದ್ದು

(ಮತ್ತಾ. 27:57-61; ಲೂಕ 23:50-56; ಯೋಹಾ. 19:38-42)

42ಆಗಲೇ ಸಂಜೆಯಾಗಿತ್ತು; ಮತ್ತು ಆ ದಿನವು ‘ಸಿದ್ಧತೆಯ’ ದಿನ, ಅಂದರೆ ಸಬ್ಬತ್ ದಿನದ ಹಿಂದಿನ ದಿನವಾಗಿತ್ತು.

ಕನ್ನಡ ಬೈಬಲ್

© 2017 Bridge Connectivity Solutions. Released under the Creative Commons Attribution Share-Alike license 4.0.

More Info | Version Index